ಬೆಂಗಳೂರು : ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹತ್ಯಾ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧಕ್ಕೆ ಶಿಫಾರಸು ಮಾಡಲಾಗುವುದು ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ.!

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪಿಎಫ್ ಐ ಹಾಗೂ ಎಸ್ ಡಿಪಿಐ ಸಂಘಟನೆ ಮೇಲೆ ಹಲವು ಆರೋಪಗಳಿವೆ. ಈ ನಿಟ್ಟಿನಲ್ಲಿ ನಿಷೇಧ ಮಾಡಲು ಶಿಫಾರಸು ಮಾಡುತ್ತೇವೆ. ತನ್ವೀರ್ ಸೇಠ್ ಮೇಲಿನ ದಾಳಿಯ ಹಿಂದೆ ಎಸ್ ಡಿಪಿಐ ಸಂಘಟನೆ ಕೈವಾಡವಿದೆ. ಹಾಗಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧಕ್ಕೆ ಶಿಫಾರಸು ಮಾಡಲಾಗುತ್ತದೆ ಎಂದು ಹೇಳಿದರು.