ಬೆಂಗಳೂರು: ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರ್ಕಾರಿ ವೈದ್ಯಾಧಿಕಾರಿಗಳ ಜೊತೆ ಸಭೆ ನಡೆಸಿರುವುದನ್ನು ಕೆಪಿಸಿಸಿ ಟೀಕಿಸಿದೆ. ಈ ಬಗ್ಗೆ ಕಾಂಗ್ರೆಸ್‌ ಟ್ವೀಟ್‌ ಮಾಡಿದ್ದು, ತಾವು ಮುಖ್ಯಮಂತ್ರಿ ಅಲ್ಲ, ಮಂತ್ರಿಯಲ್ಲ, ಸಂಸದರಲ್ಲ ಶಾಸಕರಲ್ಲ, ಗ್ರಾಮ ಪಂಚಾಯ್ತಿ ಸದಸ್ಯ ಕೂಡ ಅಲ್ಲ. ಹೀಗಿದ್ದರೂ ಸರ್ಕಾರಿ ವೈದ್ಯಾಧಿಕಾರಿಗಳ ಸಭೆ ನಡೆಸಿದ್ದೇಕೆ, ನಿಮಗೆ ಆ ಅಧಿಕಾರ ಕೊಟ್ಟವರಾರು? ಆಡಳಿತ ಯಂತ್ರದಲ್ಲಿ ಮೂಗು ತೂರಿಸಿದ ಈ ‘ದಲ್ಲಾಳಿತನ’ ಪ್ರಜಾಪ್ರಭುತ್ವದ ಪವಿತ್ರತೆಗೆ ಧಕ್ಕೆ ತಂದಿದೆ ಎಂದು ಹೇಳಿರುವ ಹಿನ್ನೆಲೆಯಲ್ಲಿ

ಇದಕ್ಕೆ ಪ್ರತಿಕ್ರಿಯಿಸಿರುವ ವಿಜಯೇಂದ್ರ ಅವರು, ಯುಪಿಎ ಆಡಳಿತಾವಧಿಯಲ್ಲಿ ದೇಶದ ಅತ್ಯುನ್ನತ ಸ್ಥಾನ ಅಲಂಕರಿಸಿದ ಪ್ರಧಾನಮಂತ್ರಿಯವರನ್ನು ತಮ್ಮ ಮನೆಗೆ ಕರೆಸಿಕೊಳ್ಳುತ್ತಿದ್ದ ಗುಲಾಮಿ ಪದ್ಧತಿಯ ಸಂಸ್ಕೃತಿ ನಮ್ಮದಲ್ಲ ಎಂದು ಹೇಳಿದ್ದಾರೆ. ಯಡಿಯೂರಪ್ಪ ಕುಟುಂಬದ ಸದಸ್ಯ ಎನ್ನುವುದಕ್ಕಿಂತ ರಾಜ್ಯ ಬಿಜೆಪಿಯ ಜವಾಬ್ದಾರಿಯುತ ಉಪಾಧ್ಯಕ್ಷನಾಗಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.