ಬೆಂಗಳೂರು: ಎಂಜಿನಿಯರಿಂಗ್ ಪದವಿ ಮುಗಿಸಿದವರಿಗೆ ಅಪ್ರೆಂಟಿಸ್ ಹುದ್ದೆಗಳ ಭರ್ತಿ ಮಾಡಿಕೊಳ್ಳುವುದಾಗಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಹೇಳಿದೆ.

ಆಯ್ಕೆಯಾದವರಿಗೆ ತಿಂಗಳಿಗೆ 25 ಸಾವಿರ ರೂ.ಗಳವರೆಗೆ ವಿದ್ಯಾರ್ಥಿವೇತನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ತರಬೇತಿ ಯೋಜನೆ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕು. ಮೇ 2019 ರ ನಂತರ ಎಂಜಿನಿಯರಿಂಗ್ ಪೂರ್ಣಗೊಳಿಸಿದವರು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗೆ portal.mhrdnats.gov.in ನೋಡಿ.