ಆಂಧ್ರಪ್ರದೇಶ : ತಿರುಪತಿ ತಿರುಮಲ ದೇವಾಲಯದಲ್ಲಿನ ಬಾಯ್ಲರ್ ನಿಂದ ಬಿಸಿನೀರು ಸೋರಿಕೆಯಾಗಿ, ಕಾರ್ಮಿಕರಿಗೆ ಸಿಡಿದಿದ್ದರಿಂದಾಗಿ, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ. ಇವರಲ್ಲಿ ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದು ಬಂದಿದೆ.

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವಂತ ಟಿಟಿಡಿ, ಅಡುಗೆ ಮನೆಯಲ್ಲಿ ಬಾಯ್ಲರ್ ನಿಂದ ನೀರು ಸೋರಿಕೆಯಾಗಿ, ಕಾರ್ಮಿಕರ ಮೇಲೆ ಬಿದ್ದಿರುವ ಪರಿಣಾಮ, ಐವರು ಕೆಲಸಗಾರರು ಗಾಯಗೊಂಡಿದ್ದಾರೆ. ಇಂತಹ ಕಾರ್ಮಿಕರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿರುವುದಾಗಿ ತಿಳಿಸಿದೆ.