ಬಳ್ಳಾರಿ: ಜಿಲ್ಲೆಯಲ್ಲಿರುವ ತುಂಗಭದ್ರಾ ಜಲಾಶಯದ ಒಳಹರಿವು ಸೋಮವಾರ ಭಾರಿ ಹೆಚ್ಚಳ ಕಂಡಿದೆ.

ಭಾನುವಾರ 17,138 ಕ್ಯುಸೆಕ್‌ ಒಳಹರಿವು ದಾಖಲಾಗಿದ್ದು, 1,633 ಅಡಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 1,606.97 ಅಡಿ ನೀರಿದೆ. ಕಳೆದ ಎರಡ್ಮೂರು ದಿನಗಳಿಂದ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ರೀತಿಯಲ್ಲಿ ಮಳೆಯಾಗುತ್ತಿದ್ದು, ಇದರಿಂದಾಗಿ ಒಳಹರಿವು ಏರಿಕೆಯಾಗಿದೆ.

ಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗಬಹುದು ಎಂದು ತುಂಗಭದ್ರಾ ಜಲಾಶಯದ ಆಡಳಿತ ಮಂಡಳಿ ತಿಳಿಸಿದೆ.