ಬೆಂಗಳೂರು : ತೆಂಗಿನ ನಾರಿನ ಉದ್ಯಮ ಸ್ಥಾಪನೆಗೆ ರಾಜ್ಯದಲ್ಲಿ ವಿಫುಲ ಅವಕಾಶಗಳಿದ್ದು, ಕನಿಷ್ಠ 1 ಲಕ್ಷ ಉದ್ಯೋಗಾವಕಾಶ ಸೃಷ್ಠಿ ಆಗಲಿದೆ ಇದರಿಂದ ನಿರುದ್ಯೋಗ ಯುವಕರಿಗೆ ಕೆಲಸ ಸಿಕ್ಕಂತ್ತಾಗುತ್ತದೆ ಎಂದು ಅಧಿಕಾರಿಗಳಿಗೆ ಸಿಎಂ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ತೆಂಗಿನ ನಾರಿನ ಉದ್ಯಮಗಳ ಪುನಶ್ಚೇತನದ ಬಗ್ಗೆ ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಸಿಎಂ ಕುಮಾರಸ್ವಾಮಿ ಅವರು ಈ ಸೂಚನೆ ನೀಡಿದ್ದು, ದೇಶದ ಒಟ್ಟು ತೆಂಗು ಉತ್ಪಾದನೆಯಲ್ಲಿ ಶೇ. 29 ರಷ್ಟು ಕರ್ನಾಟಕದಲ್ಲಿ ಆಗುವ ಮೂಲಕ 2ನೇ ಸ್ಥಾನದಲ್ಲಿದೆ. ಆದರೆ ನಾರಿನ ಉತ್ಪಾದನೆಯಲ್ಲಿ ರಾಜ್ಯದ ಪಾಲು ಶೇ. 10 ರಷ್ಟು ಮಾತ್ರ ಎಂದು ಹೇಳಿದರು..

ತೆಂಗಿನ ನಾರು ಹೇರಳವಾಗಿ ಲಭ್ಯ ಇರುವುದರಿಂದ ಈ ಉದ್ಯಮದ ಸ್ಥಾಪನೆ ಮತ್ತು ಬೆಳವಣಿಗೆಗೆ ಗಮನ ಕೊಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.!