ಚಿತ್ರದುರ್ಗ: ಹನ್ನೆರಡನೆ ಶತಮಾನದಲ್ಲಿಯೇ ಅಸಮಾನತೆಗಾಗಿ ಹೋರಾಡಿದ ಮಹಾನ್ ಮಾನವತಾವಾದಿ ಬಸವಣ್ಣನವರನ್ನು ಎಲ್ಲಾ ಜಾತಿಯವರು ಪೂಜಿಸಬೇಕು ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಆಂಜನೇಯ ತಿಳಿಸಿದರು.
ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕøತಿ ಇಲಾಖೆ, ನಗರಸಭೆ ಸಂಯುಕ್ತಾಶ್ರಯದಲ್ಲಿ ತ.ರಾ.ಸು.ರಂಗಮಂದಿರದಲ್ಲಿ ಮಂಗಳವಾರ ನಡೆದ ಮಾದಾರ ಚನ್ನಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಮಾದಾರ ದೂಳಯ್ಯ, ಉರಿಲಿಂಗಪೆದ್ದಿ ಇನ್ನು ಮೊದಲಾದ ದಲಿತ ವಚನಕಾರರ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದರು.

900 ವರ್ಷಗಳ ಹಿಂದೆ ಹಿಂದುಳಿದವರು ದಲಿತ ವಚನಕಾರರನ್ನು ಒಂದೆಡೆ ಸೇರಿಸಿ ಎಲ್ಲರನ್ನು ಒಗ್ಗೂಡಿಸಿ ಸಮ ಸಮಾಜ ನಿರ್ಮಾಣಕ್ಕೆ ಹೆಚ್ಚಿನ ಒತ್ತು ನೀಡಿದ ಬಸವಣ್ಣನವರು ಚಳುವಳಿ ಮಾಡದಿದ್ದರೆ ಅಸ್ಪøಶ್ಯರ ಸ್ಥಿತಿ ಇಂದಿಗೂ ಶೋಚನೀಯವಾಗಿರುತ್ತಿತ್ತು. ಅವರ ಸಮಾನತೆ ತತ್ವಸಿದ್ದಾಂತ ಇಂದು ಎಲ್ಲರಿಗೂ ದಾರಿದೀಪವಾಗಿದೆ ಎಂದು ಹೇಳಿದರು.

ದಾವಣಗೆರೆಯ ನಿವೃತ್ತ ಪ್ರಾಧ್ಯಾಪಕ ಹಂಪಣ್ಣ ಉಪನ್ಯಾಸ ನೀಡಿದರು. ಸಂಸದ ಬಿ.ಎನ್.ಚಂದ್ರಪ್ಪ, ಜಿಲ್ಲಾಧಿಕಾರಿ ವಿ.ವಿ.ಜೋತ್ಸ್ನ, ಜಿ.ಪಂ.ಅಧ್ಯಕ್ಷೆ ಸೌಭಾಗ್ಯ ಬಸವರಾಜನ್, ಲಿಡ್ಕರ್ ಚೇರ್ಮನ್ ಓ.ಶಂಕರ್ ನಗರಸಭೆ ಅಧ್ಯಕ್ಷ ಹೆಚ್.ಎನ್.ಮಂಜುನಾಥಗೊಪ್ಪೆ, ಅಪರ ಜಿಲ್ಲಾಧಿಕಾರಿ ಸಂಗಪ್ಪ, ಉಪವಿಭಾಗಾಧಿಕಾರಿ ವಿಜಯಕುಮಾರ್, ತಹಶೀಲ್ದಾರ್ ಮಲ್ಲಿಕಾರ್ಜುನ, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಇನ್ನು ಮೊದಲಾದವರು ವೇದಿಕೆಯಲ್ಲಿದ್ದರು.