ಚಿತ್ರದುರ್ಗ:  ಚಳ್ಳಕೆರೆಯ ರೋಸಾ ಹೋಟೆಲ್ ಬಳಿ ಚೆಕ್‌ಪೋಸ್ಟ್‌ನಲ್ಲಿ ಸಂಜೆ 6 ಗಂಟೆಯ ಸಮಯದಲ್ಲಿ ತಪಾಸಣೆ ವೇಳೆ ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ ರೂ.4 ಲಕ್ಷ ವಾಹನದೊಂದಿಗೆ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.

ವಶಕ್ಕೆ ಪಡೆಯಲಾದ ಹಣದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು ಕ್ಯಾಶ್ ಸೀಜಿಂಗ್ ಸಮಿತಿಗೆ ಒಪ್ಪಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ಧಾರೆ.