ದಾವಣಗೆರೆ:, ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪಷ್ಟಪಡಿಸಿದ್ದಾರೆ.

ಮಲ್ಲಿಕಾರ್ಜುನ್ ಅವರನ್ನು ಕಣಕ್ಕಿಳಿಸುವಂತೆ ಪಕ್ಷದ ವರಿಷ್ಠರೇ ದೂರವಾಣಿ ಕರೆ ಮಾಡಿ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ನಾವು ಒಪ್ಪಿಗೆ ಸೂಚಿಸಿದ್ದೇವೆ. ಈ ಬಾರಿ ಮೋದಿ ಹವಾ ನೆಲಕಚ್ಚಿದ್ದು, ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಯೇ ಜಯ ಸಾಧಿಸುತ್ತಾರೆ ಎಂದರು.