ಬೆಂಗಳೂರು – ಹಳೆ ಬೆಂಗಳೂರು ಈಗಾಗಲೇ ಸಾಕಷ್ಟು ಅಭಿವೃದ್ಧಿಯಾಗಿದೆ. ಅದಕ್ಕಿಂತ ನನ್ನ ಕ್ಷೇತ್ರ ಹೆಚ್ಚು ಅಭಿವೃದ್ಧಿಯಾಗಬೇಕು. ದಿನದ 20 ಗಂಟೆ ನಾನು ಕೆಲಸದಲ್ಲಿ ತೊಡಗಿಸಿಕೊಳ್ಳುತ್ತೇನೆ ಎಂದು ಆರ್‍ಆರ್ ನಗರ ಕ್ಷೇತ್ರದ ಬಿಜೆಪಿ ವಿಜೇತ ಅಭ್ಯರ್ಥಿ ಮುನಿರತ್ನ ನಾಯ್ಡು ಹೇಳಿದರು.

ಸುಮಾರು 57 ಸಾವಿರಕ್ಕೂ ಹೆಚ್ಚು ಮತಗಳಿಂದ ಗೆಲ್ಲಲು ಮತದಾರರು ಅವಕಾಶ ಮಾಡಿಕೊಟ್ಟಿದ್ದಾರೆ. ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ. ಮೊದಲ ಬಾರಿ 17 ಸಾವಿರ ಮತ, ಎರಡನೆ ಬಾರಿ 27 ಸಾವಿರ ಮತ, ಮೂರನೆ ಬಾರಿ 57 ಸಾವಿರ ಮತಗಳಿಂದ ನನ್ನನ್ನು ಗೆಲ್ಲಿಸಿದ್ದಾರೆ. ಈ ಮತಗಳ ಅಂತರವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಪಕ್ಷದ ಮುಖಂಡರು, ನನ್ನ ಗೆಲುವಿಗೆ ಶ್ರಮಿಸಿದ ಎಲ್ಲ ಸಚಿವರು, ಪಕ್ಷದ ಕಾರ್ಯಕರ್ತರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.

ಹಳೆ ಬೆಂಗಳೂರು ಸಾಕಷ್ಟು ಅಭಿವೃದ್ಧಿಯಾಗಿದೆ. ಈ ಭಾಗದಲ್ಲೂ ಅಭಿವೃದ್ಧಿ ಕೆಲಸ ಮಾಡಬೇಕಿದೆ. ಅದಕ್ಕಾಗಿ ನಾನು 20 ಗಂಟೆ ಕೆಲಸ ಮಾಡುತ್ತೇನೆ. ನನ್ನನ್ನು ಕೈ ಹಿಡಿದ ಈ ಕ್ಷೇತ್ರದ ಜನರ ಋಣ ತೀರಿಸಲು ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.