ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗುತ್ತದೆಯಂತೆ.

2019 ರ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಹುದ್ದೆ ಅಧ್ಯಕ್ಷರ ನೇಮಕ ಕುರಿತಂತೆ ರಾಷ್ಟ್ರೀಯ ಕಾಂಗ್ರೆಸ್ ನಿರ್ಧಾರ ಮಾಡಿದ್ದಾರೆ.

ಈ ಬಗ್ಗೆ ಇದೇ ತಿಂಗಳ 14ರಂದು ಅಧಿಕೃತವಾಗಿ ಅದೇಶವನ್ನು ರಾಜ್ಯ ಹಾಗೂ ರಾಷ್ಟ್ರನಾಯಕರು ಘೋಷಣೆ ಮಾಡಲಿದ್ದು, ಬೆಂಗಳೂರು ಅಥಾವ ನವದೆಹಲಿಯಲ್ಲಿ ರಾಹುಲ್ ಗಾಂಧಿ ಆಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಈ ಬಗ್ಗೆ ತಿಳಿಸಲಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ದೆಹಲಿಗೆ ತೆರಳಿದ್ದ ವೇಳೆ ರಾಹುಲ್ ಗಾಂಧಿ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಸಂಬಂಧಿಸಿದಂತೆ ದಿನೇಶ್ ಜೊತೆ ಚರ್ಚಿಸಿದ್ದರು. ಖಾತೆ ಹಂಚಿಕೆ ಮುಗಿದ ನಂತರ ಹೈಕಮಾಂಡ್ ಕೆಪಿಸಿಸಿ ಹುದ್ದೆ ಆಯ್ಕೆ ಸಂಬಂಧ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.