ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಮತ್ತೆ ಸಿಎಂ ಯಡಿಯೂರಪ್ಪ ಪರ ಬ್ಯಾಟ್ ಮಾಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ದೇವೆಗೌಡರು ಯಡಿಯೂರಪ್ಪ  ನಮಗೆ ಶತ್ರುವಲ್ಲ.! ರಾಜಕೀಯದಲ್ಲಿ ಶಾಶ್ವತ ಶತ್ರುಗಳಾಗಲಿ, ಮಿತ್ರಾರಾಗಲಿ ಇಲ್ಲ ಎನ್ನುವ ಮೂಲಕ ಹೊಸ ಸಂದೇಶ ನೀಡಿದ್ದಾರೆ.

ಯಾವ ಸಂದರ್ಭದಲ್ಲಿ ಏನು ಬೇಕಾದರೂ ಆಗಬಹುದು. ಮಹಾರಾಷ್ಟ್ರದಲ್ಲಿ ಈಗ ಏನಾಗಿದೆ ಎಲ್ಲರಿಗೂ ಗೊತ್ತು. ಹಾಗಾಗಿ ಎರಡು ಪಕ್ಷಗಳ ಜೊತೆ ಮಾತನಾಡುವ ಅವಶ್ಯಕತೆ ನಮಗಿಲ್ಲ ಎಂದಿದ್ದಾರೆ.!