ಮಂಡ್ಯ : ಡಿ.ದೇವೇಗೌಡರು ಮತ್ತೆ ಪ್ರಧಾನಿಯಾಗಲು ಸಾಧ್ಯವಿಲ್ಲ. ಬರಲಿರುವ ಲೋಕಸಭಾ ಚುನಾವಣೇಯಲ್ಲಿ ಮತ್ತೆ  ನರೇಂದ್ರ ಮೋದಿ ಮತ್ತೆ ಪ್ರಧಾನಿ ಆಗುತ್ತಾರೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಯಲ್ಲಿ ಮಾತನಾಡುತ್ತಾ, ದೇಶದಲ್ಲಿ ಈಗಾಗಲೇ ತೃತೀಯ ರಂಗ ಸಂಘಟನೆಯಾಗಿದೆ. ಈ ನಾಯಕರು ಏನೇ ಮಾಡಿದರೂ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ ಮತ್ತೆ ನರೇಂದ್ರ ಮೋದಿಯವರು ಪ್ರಧಾನಿ ಆಗುತ್ತಾರೆ ಎಂದರು.

ಈ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮಾತೋಲನೆ ಎದ್ದು ಕಾಣುತ್ತಿದೆ. ಇದು ರಾಜ್ಯ ಬಜೆಚ್‌ ಅಲ್ಲ. ಉತ್ತರ ಕರ್ನಾಟಕ, ಕರಾವಳಿ, ಹಳೆ ಮೈಸೂರು, ಮಲೆನಾಡು ಎಂದು ವಿಂಗಡಿಸಿ ತಾರತಮ್ಯ ಮಾಡಲಾಗಿದೆ. ಅಣ್ಣ-ತಮ್ಮಂದಿರ ಬಜೆಚ್‌ ನಲ್ಲಿ ಎಲ್ಲಾ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಹೇಳಿದರು.