ನವದೆಹಲಿ: ಒಂದೆಡೆ ಕೊರೋನಾ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ದೇಶದಲ್ಲಿ ಗುಣಮುಖರಾದವರ ಪ್ರಮಾಣ ಶೇ.60ನ್ನು ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಚೇತರಿಕೆ ಪ್ರಮಾಣದಲ್ಲಿ ತೀವ್ರ ಗತಿಯ ಏರಿಕೆ ಕಂಡಿದ್ದು, 20,033 ಸೋಂಕಿತರು ಗುಣಮುಖರಾಗಿದ್ದಾರೆ. ಇದರಿಂದಾಗಿ ಒಟ್ಟಾರೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 3,79,891ಕ್ಕೆ ಏರಿಕೆ ಆಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.!