ಮಂಗಳೂರು: ಸಮಿಶ್ರ ಸರಕಾರದ ಭವಿಷ್ಯ ಕೇವಲ 15 ದಿನ ಅಥವಾ ಒಂದು ತಿಂಗಳು ಮಾತ್ರ ಅಧಿಕಾರದಲ್ಲಿರುತ್ತೆ ಎಂದು ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಭವಿಷ್ಯ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಪಕ್ಷವನ್ನು ಅಧಿಕಾರದಿಂದ ದೂರ ಇಡಬೇಕು ಎಂಬ  ಉದ್ದೇಶದಿಂದ ಕಾಂಗ್ರೆಸ್ ಮತ್ತು ಜೆಡಿಎಸ್‍ಒಂದಾಗಿ ಸರ್ಕಾರ ರಚನೆ ಮಾಡಿದೆ. ಅವರಿಗೆ ರಾಜ್ಯದ ಜನತೆಗೆ ಒಳ್ಳೆಯದನ್ನು ಮಾಡುವ ಉದ್ದೇಶವಿಲ್ಲ . ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸ್ವಾರ್ಥ ರಾಜಕಾರಣಿಗಳು ಎಂದು ಟೀಕಿಸಿದರು.

ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿಯವರ ಮುಸುಕಿನ ಗುದ್ದಾಟ ನಡೆಯುತ್ತಿದೆ. ಯಾವುದೇ ಸಮಯದಲ್ಲಾದರೂ ಸರಕಾರ ಪತನವಾಗುವುದರಲ್ಲಿ ಸಂದೇಹವಿಲ್ಲ ಎಂದು ಹೇಳಿದ್ದಾರೆ.