ಬೆಂಗಳೂರು: ದೋಸ್ತಿ ಸರಕಾರದ ಸಮನ್ವಯ ಸಮಿತಿ ಸಭೆ ಮುಂದಕ್ಕೆ ಹೋಗಿದೆ ಏಕೆಂದ್ರೆ ಕೊಡಗಿನ ಉಂಟಾದ  ಪ್ರವಾಹದ ಹಿನ್ನಲೆಯಲ್ಲಿ ಸಮನ್ವಯ ಸಮಿತಿ ಸಭೆ ಸದ್ಯಕ್ಕೆ ಬೇಡ ಎಂದು ನಿರ್ಧರಿಸಿದ್ದೇವೆ ಎಂದು ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮಾತನಾಡಿದ ಅವರು, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡದಲ್ಲಿ ಸಾಕಷ್ಟು ಸಮಸ್ಯೆಗಳು ಉದ್ಭವಿಸಿವೆ. ಹೀಗಿರುವಾಗ ಸಭೆ ನಡೆಸೋದು ಸರಿಯಲ್ಲ ಎಂದರು.