ಬೆಂಗಳೂರು: ಯಾವುದೇ ಕಾರಣಕ್ಕೂ ದೋಸ್ತಿ ಸರ್ಕಾರ ಭದ್ರ. ಒಂದು ರೀತಿಯಾಗಿ ಬಂಡೆ ತರಹ ಭದ್ರವಾಗಿದೆ. ಯಾರು ಎಷ್ಟೇ ಸದ್ದು ಮಾಡಿದರೂ ಏನೂ ಪ್ರಯೋಜನವಾಗುವುದಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸುಮಾರು 167 ಅಲ್ಪಸಂಖ್ಯಾತ ಸಮುದಾಯದ ಯುವಕರಿಗೆ ಟ್ಯಾಕ್ಸಿ ಹಾಗೂ ಸರಕು ಸಾಗಾಣಿಕೆ ವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನು ಆರು ತಿಂಗಳಲ್ಲಿ ಕರ್ನಾಟಕದಲ್ಲಿ ಭೂಕಂಪವಾಗಲಿದೆ. ಯಡಿಯೂರಪ್ಪ ತೆಗೆದುಕೊಳ್ಳುವ ನಿರ್ಧಾರದ ಮೇಲೆ ರಾಜಕೀಯ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರು ನೀಡಿರುವ ಹೇಳಿಕೆ ಹುಸಿ ಬಾಂಬ್. ಇಂತ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದು ಅಲ್ಲ ಅಂತ ಹೇಳಿದ್ದಾರೆ.!