ಬೆಂಗಳೂರು : ಜೂನ್ 18 ರಂದು ನಡೆಯುವ
ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ರಾಜ್ಯದಲ್ಲಿರುವ 1016 ಪರೀಕ್ಷಾ ಕೇಂದ್ರಗಳನ್ನು ಗುರುತಿಸಿದ್ದು, 200 ವಿದ್ಯಾರ್ಥಿಗಳಿಗೆ ಒಂದರಂತೆ ಆರೋಗ್ಯ ತಪಾಸಣಾ ಕೇಂದ್ರ ತೆರೆಯಬೇಕು. ಜ್ವರ, ನೆಗಡಿ, ಕೆಮ್ಮು ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ, ಗಡಿ ರಾಜ್ಯದಿಂದ ಬರುವ ವಿದ್ಯಾರ್ಥಿಗಳಿಗೆ ಇ-ಪಾಸ್ ವ್ಯವಸ್ಥೆ ಮಾಡಬೇಕು ಎಂದು ಪೊಲೀಸರನ್ನು ಕೋರಬೇಕು ಎಂದು ಪಿಯು ಇಲಾಖೆ ನಿರ್ದೇಶಕಿ ಎಂ.ಕನಗವಲ್ಲಿ ಅಧಿಕಾರಿಗಳ ಮನವಿ ಮಾಡಿದ್ದಾರೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಯಾ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದ್ದು, ಸಾರಿಗೆ ಸಂಚಾರದಲ್ಲಿ ಅವ್ಯವಸ್ಥೆ ಆಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.!