ಬೆಂಗಳೂರು : ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯು ಗುರುವಾರ ನಡೆಸಿದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ಕೀ ಉತ್ತರಗಳನ್ನು ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ.

ವಿದ್ಯಾರ್ಥಿಗಳು ಅಥವಾ ಉಪನ್ಯಾಸಕರು ಕೀ ಉತ್ತರಗಳ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ ಸೈಟ್ www.pue.kar.nic.in ಗೆ ಭೇಟಿ ನೀಡಬಹುದು.