ಬೆಂಗಳೂರು: ಸೆಪ್ಟೆಂಬರ್ 1 ರಿಂದ ಆನ್ಲೈನ್ ತರಗತಿ ಶುರುವಾಗಲಿದ್ದು, ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದಲ್ಲಿ ಅಕ್ಟೋಬರ್ 1 ರಿಂದ ರೆಗ್ಯುಲರ್ ತರಗತಿಗಳು ಆರಂಭವಾಗಲಿವೆ ಎಂದು ಉನ್ನತ ಶಿಕ್ಷಣ ಸಚಿವರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಸೂಚನೆ ನೀಡಿದ್ದಾರೆ.

ತಕ್ಷಣದಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ಅರ್ಜಿ ವಿತರಿಸಲು ಎಲ್ಲಾ ಕಾಲೇಜುಗಳಿಗೆ ಡಿಸಿಎಂ ಸೂಚನೆ ನೀಡಿದ್ದಾರೆ. ಅಂತಿಮ ಪದವಿ ಪರೀಕ್ಷೆಗಳನ್ನು ಆದಷ್ಟು ಬೇಗ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ನಡೆಸುವಂತೆ ತಿಳಿಸಿದ್ದಾರೆ.!