ಬೆಂಗಳೂರು : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅನುತ್ತೀರ್ಣ ಅಭ್ಯರ್ಥಿಗಳಿಗೆ ಪೂರಕ ಪರೀಕ್ಷಾ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಲು ಜುಲೈ 31 ರವರೆಗೆ ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಅನುತ್ತೀರ್ಣ ಅಭ್ಯರ್ಥಿಗಳು ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಆನ್ ಲೈನ್ ಪೋರ್ಟಲ್ ಮೂಲಕ ಸಂದಾಯ ಮಾಡಲು ಕಡೇ ದಿನಾಂಕ 31-07-2020 ಆಗಿರುತ್ತದೆ. ಕಾಲೇಜಿನವರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಲು ದಿನಾಂಕ 03-08-2020 ಕೊನೆಯ ದಿನಾಂಕವಾಗಿದೆ. ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಛೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕಾದ ದಿನಾಂಕ 05-08-2020 ಆಗಿರುತ್ತದೆ ಎಂಬುದಾಗಿ ಮಾಹಿತಿ ನೀಡಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಹೊರತುಪಡಿಸಿ, ಒಂದು ವಿಷಯಕ್ಕೆ ರೂ.140, ಎರಡು ವಿಷಯಕ್ಕೆ ರೂ.270, ಮೂರು ಅಥವಾ ಹೆಚ್ಚಿನ ವಿಷಯಗಳಿಗೆ ರೂ.400 ಆಗಿರುತ್ತದೆ. ಪರಿಶಿಷ್ಟ ಜಾರಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಕಡ್ಡಾಯವಾಗಿ ಸಲ್ಲಿಸಬೇಕಾದ ಅಂಕಪಟ್ಟಿ ಶುಲ್ಕ ರೂ.50 ಆಗಿರುತ್ತದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ತಿರಸ್ಕರಿಸಿದ್ರೇ, ಪ್ರಥಮ ಬಾರಿಗೆ ಒಂದು ವಿಷಯಕ್ಕೆ ರೂ.175, ದ್ವಿತೀಯ ಹಾಗೂ ಅಂತಿಮ ಬಾರಿಗೆ ಒಂದು ವಿಷಯಕ್ಕೆ ರೂ.350 ರೂ. ಆಗುತ್ತದೆ.

(ಸಾಂದರ್ಭಿಕ ಚಿತ್ರ)