ಬೆಂಗಳೂರು :, ಜುಲೈ 23 ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿ ಪೂರ್ವಶಿಕ್ಷಣ ಇಲಾಖೆ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು ಯುಟ್ಯೂಬ್ ನಲ್ಲಿ ಲೈ ವಿಡಿಯೋಗಳ ಬೋಧನೆ ಆರಂಭಿಸಲು ಮುಂದಾಗಿದೆ.!

ದ್ವಿತಿಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿದಿನ 45 ನಿಮಿಷಗಳ 4 ತರಗತಿಗಳನ್ನು ನಡೆಸಲು ಚಿಂತಿಸಲಾಗಿದ್ದು, ಪ್ರತಿದಿನ ಬೆಳಗ್ಗೆ 9 ರಿಂದ 12 ಗಂಟೆವರೆಗೆ ಪಾಠಗಳನ್ನು ಬೋಧಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.

ವಿದ್ಯಾರ್ಥಿಗಳು https://www.youtube.com/c/dpuedkpucpa ಲಿಂಕ್ ನಲ್ಲಿ ತರಗತಿಗಳನ್ನು ವೀಕ್ಷಿಸಬಹುದಾಗಿದ್ದು, ಸ್ಮಾರ್ಟ್ ಫೋನ್, ಲ್ಯಾಪ್ ಟಾಪ್, ಇಂಟರ್ ನೆಟ್ ಸೌಲಭ್ಯ ಇಲ್ಲದ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗುವುದು ಬೇಡ. ಕಾಲೇಜು ಆರಂಭವಾದ ಮೇಲೆ ಮತ್ತೊಮ್ಮೆ ಪಾಠಗಳನ್ನು ಬೋಧಿಸಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಎಂ. ಕನಗವಲ್ಲಿ ಮಾಹಿತಿ ನೀಡಿದ್ದಾರೆ.