ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿನಿಯರೇ ಮೇಲುಗೈ ಸಾದಿಸಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಪ್ರಥಮ ಹಾಗೂ ವಿಜಯಪುರ ಜಿಲ್ಲೆ ಕೊನೆ ಸ್ಥಾನ ಪಡೆದುಕೊಂಡಿದೆ.

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ಒಟ್ಟಾರೆ ಶೇ.69.20 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ ಶೇ.76.02, ವಾಣಿಜ್ಯ ವಿಭಾಗದಲ್ಲಿ ಶೇ,65.52, ಕಲಾವಿಭಾಗದಲ್ಲಿ ಶೇ. 41.27 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.