ಧರ್ಮಸ್ಥಳ: ಧರ್ಮಸ್ಥಳದಲ್ಲಿ ಭಕ್ತರು ಹಾಗೂ ಭಕ್ತರ ನಡುವೆ ಹೊಡೆದಾಟ ನಡೆದಿದೆ ಎನ್ನಲಾಗಿದೆ.

ದೇವರ ದರ್ಶನ ಪಡೆಯುವ ಸಲುವಾಗಿ ಭಕ್ತರು ಸರತಿ ಸಾಲಿನಲ್ಲಿ ನಿಂತುಕೊಂಡಿದ್ದ ವೇಳೆಯಲ್ಲಿ ಭದ್ರತ ಸಿಬ್ಬಂದಿ ಹಾಗೂ ಭಕ್ತರ ನಡುವೆ ಮಾತಿನ ಚಕಮಕಿ ನಡೆದು, ಭದ್ರತಾ ಸಿಬ್ಬಂದಿ ಮಹಿಳೆ, ಮಕ್ಕಳೆನ್ನದೇ ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಪೋಲಿಸರು ಆಗಮಿಸಿ ಪರಿಸ್ಥಿತಿಯನ್ನು ಹತೋಟಿಗೆ ತರುವಲ್ಲಿ ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.