ಮುಂಬೈ, ನಕಲಿ ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ನೆಟ್ ವರ್ಕ್ ವಿತರಣಾ ವಿಭಾಗದ ಸಹಾಯಕ ಉಪಾಧ್ಯಕ್ಷ ಘನಶ್ಯಾಮ್ ಅವರನ್ನು ಮುಂಬೈ ಅಪರಾಧ ವಿಭಾಗದ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.

ಕಳೆದ ಕೆಲವು ವಾರಗಳಿಂದ ನಕಲಿ ಟಿಆರ್ ಪಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಈ ಹಿಂದೆಯೂ ಘನಶ್ಯಾಮ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ಇದೀಗ ಅವರನ್ನು ವಶಕ್ಕೆ ಪಡೆಯಲಾಗಿದೆ.