ಮಂಡ್ಯ: 30 ವರ್ಷದ ಕೆಳೆಗೆ ಕಾಂಗ್ರೆಸ್ ಪಕ್ಷದಲ್ಲಿ 2 ರೂ ಕೊಟ್ಟು ಪಕ್ಷದ ಸದಸ್ಯತ್ವ ಪಡೆದಿದ್ದೇನೆ ಅಲ್ಲಿಂದ ಇಲ್ಲಿಯ ತನಕ ನಾನು ನಿಷ್ಠಾವಂತ ಕಾರ್ಯಕರ್ತೆಆದ್ರೆ ಪಕ್ಷಕ್ಕಾಗಿ ದುಡಿದ ನನಗೆ ಪಕ್ಷ ಕಡೆಗಣಿಸಿದೆ ಹಾಗಾಗಿ ಪಕ್ಷೇತರ ಅಭ್ಯರ್ಥಿ ಆಗಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಲು ತಯಾರಾಗಿದ್ದೇನೆ ಅಂತ ಹೇಳಿದ್ದು ಬೇರೆ ಯಾರು ಅಲ್ಲ ಮಾಜಿ ಸಂಸದೆ ರಮ್ಯಾ ತಾಯಿ ಹೇಳಿದ್ದಾರೆ.

 ಬರುವ  ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಮಾಜಿ ಸಂಸದೆ ರಮ್ಯಾ ಅವರ ತಾಯಿ ಸ್ಪರ್ಧೆ ಮಾಡಲಿದ್ದು, ಈ ಬಗ್ಗೆ ಇನ್ನೊಂದು ವಾರದಲ್ಲಿ ಮಂಡ್ಯಕ್ಕೆ ಬಂದು ಬೆಂಬಲಿಗರ ಜೊತೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.

ನಾನು 1980ರ ದಶಕದಲ್ಲಿ 2 ರೂಪಾಯಿ ಕೊಟ್ಟು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಪಡೆದುಕೊಂಡಿದ್ದೇವೆ. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಪಕ್ಷಕ್ಕಾಗಿ ಮನೆ ಮನೆ ಬಾಗಿಲಿಗೆ ಹೋಗಿ ಕ್ಯಾಂಪೇನ್ ಮಾಡಿದ್ದೇವೆ. ಆದ್ರೆ ಕಾಂಗ್ರೆಸ್ ಪಕ್ಷದವರು ಪಕ್ಷಕ್ಕಾಗಿ ದುಡಿದ ನಮ್ಮನ್ನು ಕಡೆಗಣಿಸಿದ್ದಾರೆ, ಇದಲ್ಲದೇ ರಾಜ್ಯ ರಾಜಕಾರಣದಲ್ಲಿ ರಮ್ಯಾರನ್ನು ಕಡೆಗಣಿಸಲಾಗಿದೆ.

ಕಾಂಗ್ರೆಸ್ ಪಕ್ಷದಿಂದಲೇ ಟಿಕೆಟ್ ಕೇಳುತ್ತಿದ್ದೆ. ಆದ್ರೆ ಅಂಬರೀಶ್ ಅಣ್ಣ ಕಾಂಗ್ರೆಸ್ ಪಕ್ಷದಿಂದ ಎಲೆಕ್ಷನ್‍ಗೆ ನಿಲ್ಲುತ್ತಿದ್ದಾರೆ. ಹಾಗಾಗಿ ಪಕ್ಷದಿಂದ ಟಿಕೆಟ್ ಕೇಳಿಲ್ಲ ಹಾಗಾಗಿ ಚುನಾವಣೆಗೆ ಪಕ್ಷೇತರಾಗಿ ನಿಲ್ಲುವೆ ಅಂತ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಇದಪ್ಪಾ ರಾಜಕೀಯದಲ್ಲಿ ಏನೆಲ್ಲಾ ನಡಿಬಹುದು ಎಂಬುದಕ್ಕೆ ಒಂದು ಉದಾಹರಣೆ ಮಾತ್ರ.ಅಥವಾ ಬದಲಾದರೂ ಆಗಬಹುದು ಚುನಾವಣೆ ಮುಗಿಯುವ ತನಕ ಇಂತಹ ಗಾಸಿಪ್ ಸುದ್ದಿಗಳು ಹರಿದಾಡಬಹುದು ಅಥವಾ ಸತ್ಯ ಆಗಲೂಬಹುದು…. ?