ಬೆಂಗಳೂರು : ಇಂದು ಬೆಳ್ಳಂ ಬೆಳಿಗ್ಗೆ ನಟಿ ಸಂಜನಾ ಗುಲ್ರಾನಿ ಮನೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪ ಹೊತ್ತಿರುವ ನಟಿ ಮನೆಗೆ ಇಂದಿರಾ ನಗರದಲ್ಲಿರುವ ಅವರ ನಿವಾಸದ ಮೇಲೆ ಸಿಸಿಬಿ ಇನ್ಸ್ ಪೆಕ್ಟರ್ ಅಂಜುಮಾಲ, ಪೂರ್ಣಿಮಾ ನೇತೃತ್ವದ ತಂಡದಿಂದ ದಾಳಿ ನಡೆದಿದೆ.

ಡ್ರಗ್ಸ್ ದಂಧೆಯಲ್ಲಿ ನಟಿ ಸಂಜನಾ ಹೆಸರು ಕೇಳಿ ಬರುತ್ತಿದ್ದು, ಈಗಾಗಲೇ ಸಂಜನಾ ಆಪ್ತ ರಾಹುಲ್ ನನ್ನು ಸಿಸಿಬಿ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ರಾಹುಲ್ ಹೇಳಿಕೆ ಆಧಾರದ ಮೇಲೆ ನಟಿ ಸಂಜನಾ ಮನೆ ಮೇಲೆ ಸಿಸಿಬಿ ದಾಳಿ ನೆಸಿ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.