ಮೈಸೂರು:. ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದರ್ಶನ್ ಅವರು ಸುಮಲತಾ ಅಂಬರೀಶ್  ಪರವಾಗಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.

ಸೋಮವಾರ ಮೈಸೂರಿನ ಟಿ.ನರಸೀಪುರ ರಸ್ತೆಯಲ್ಲಿರುವ ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ ನಡೆಸಲಾಯಿತು.!  ಅಧಿಕಾರಿಗಳು ಪರಿಶೀಲನೆ ನಡೆಸಿ ವಾಪಸ್ ತೆರಳಿದ್ದಾರೆ.

ಆಗ ದರ್ಶನ್ ಅವರು ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರವನ್ನು ನಡೆಸುತ್ತಿದ್ದಾಗ ದಾಳಿಯ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ ಆಗಲಿ ಬಿಡಿ ಅವರು ನಮ್ಮ  ಪ್ರಾಣಿ, ಪಕ್ಷಿಗಳನ್ನು ನೋಡಿಕೊಂಡು ಹೋಗಲಿ ಬಿಡಿ ಎಂದಷ್ಟೆ ಹೇಳಿದ್ರು.!