ಬೆಂಗಳೂರು : ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಪ್ರಚಾರದ ವೇಳೆ ನಟ ದರ್ಶನ್ ಅವರು ಕೋವಿಡ್ ಮಾರ್ಗಸೂಚಿ ಪಾಲಿಸದೇ ಪ್ರಚಾರ ನಡೆಸಿದ್ದರು. ಹೀಗಾಗಿ ನಟ ದರ್ಶನ್ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಆರ್ ಆರ್. ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಅಬ್ಬರದ ಪ್ರಚಾರದ ನಡೆಸಿದ್ದರು. ಈ ವೇಳೆ ಕೋವಿಡ್ ನಿಯಮಗಳನ್ನುಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ.