ಬೆಂಗಳೂರು : ಜಾತಿ ಆಧಾರದಲ್ಲಿ ನನಗೆ ಸಚಿವ ಸ್ಥಾನವನ್ನು ನೀಡಿಲ್ಲ ಎಂದು ಶಾಸಕ ಮುರುಗೇಶ್ ನಿರಾಣಿ ಹೇಳಿದ್ದಾರೆ. ಈ ಹಿಂದೆಯು ಸಚಿವನಾಗಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನನಗೆ ನೀಡಿದ್ದ ಖಾತೆಯನ್ನು ಜವಾಬ್ದಾರಿಯಿಂದ ನಿರ್ವಹಿಸುತ್ತೇನೆ.
ಹೀಗಾಗಿ ನನಗೆ ಮಂತ್ರಿ ಸ್ಥಾನವನ್ನು ನೀಡಿದ್ದಾರೆ. ನನಗೆ ಯಾವುದೇ ಖಾತೆಯನ್ನು ಕೊಟ್ಟರೂ ನಿಭಾಯಿಸುತ್ತೇನೆ. ಸಂಜೆ 4 ಗಂಟೆಗೆ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ನನಗೆ ಸಚಿವ ಸ್ಥಾನ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.