ಬೆಂಗಳೂರು: ‘ನಮ್ಮ ಮೆಟ್ರೋ’ ಕಾಮಗಾರಿಗಳಿಗಾಗಿ ಇನ್ಫೋಸಿಸ್ ಪ್ರತಿಷ್ಠಾನ 150 ರಿಂದ 200 ಕೋಟಿ ರೂ ದೇಣಿಗೆ ನಿಡುವುದಕ್ಕೆ ಇನ್ಫೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ  ಅವರು ಇಂದು ಗೃಹ ಕಛೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ..

ಸುಧಾಮೂರ್ತಿ ಭೇಟಿ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ “ಸಮಾಜಮುಖಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವ ಮೂಲಕ ಇನ್ಫೋಸಿಸ್ ನಾರಾಯಣಮೂರ್ತಿ ಕುಟುಂಬ ಇತರೆ ಕಾರ್ಪೋರೇಟ್ ಸಂಸ್ಥೆಗಳಿಗೆ ಮಾರದಿಯಾಗಿದೆ” ಎಂದು ಮೆಚ್ಚುಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದ್ದು , ಬೇರೆ ಸಾಫ್ಟ್ ವೇರ್ ಸಂಸ್ಥೆಗೆ ಇನ್ಫೋಸಿಸ್ ಇತರೆ ಕಾರ್ಪೋರೇಟ್ ಸಂಸ್ಥೆಗಳಿಗೆ ಮಾದರಿಯಾಗಿದೆ.