ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ರಿಂದ ಸೇಡಿನ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು.

ಇಂದು ಅವರ ಸದಾಶಿವ ನಗರದ ಮನೆಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿಕೆಶಿ ಹಾಗೂ ನನ್ನ ಮೇಲೆ ಸರ್ಚ್ ವಾರೆಂಟ್ ಜಾರಿ ಮಾಡುವ ವಿಷಯ ನಮ್ಮ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಆದ್ರೆ ನಾವು ಈ ದೇಶದ ಕಾನೂನನ್ನು ಗೌರವಿಸುತ್ತೇವೆ.

ನಮ್ಮ ಮೇಲೆ ಸುಳ್ಳು ಕೇಸು ಹಾಕಿ ನಮ್ಮ ಧ್ವನಿಯನ್ನು ಅಡಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂಬ ಸುಳಿವು ಸಿಕ್ಕಿದೆ. ಆದ್ರೆ ನಾವು ಕಾನೂನಿನ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ. ಗೋಷ್ಠಿಯಲ್ಲಿ ಡಿ.ಕೆ.ಶಿವಕುಮಾರ್ ಇದ್ದರು.