ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ರೀತಿ ಬಳಸಿಕೊಳ್ಳುತ್ತಿದೆ ಎಂಬ ಹೇಳಿಕೆಯ ಹಿನ್ನೆಲೆಯಲ್ಲಿ ಕಾರ್ಮಿಕ ಸಚಿವ ವೆಂಕಟರಮಣಪ್ಪ ಅವರು ಇಂದು ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿ ಮೋದಿ ಅವರಂತೆ ನಮ್ಮ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಸರ್ವಾಧಿಕಾರಿಯಲ್ಲ. ಮೋದಿ ಎದುರು ಅವರ ಸಂಪುಟದ ಯಾವ ಸಚಿವರೂ ಮಾತನಾಡುವಂತಿಲ್ಲ. ಆದರೆ, ಸಿಎಂ ಹೆಚ್ಡಿಕೆ ಅವರು ಬಡವರು ಮತ್ತು ರೈತರ ಬಗ್ಗೆ ಕಾಳಜಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.