ಬೆಂಗಳೂರು: ಸಿದ್ದರಾಮಯ್ಯ ಮತ್ತು ಡಿಕೆಶಿ ದಲಿತರ ಪರವೋ ಇಲ್ಲ, ಭಯೋತ್ಪಾದಕರ ಪರವೋ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯರು ಹೇಳಿದ್ದು ಹೀಗೆ.

ಕಟೀಲ್ ಅವರೇ, ನಾವು ಮನುಷ್ಯರ ಪರ, ಮನುಷ್ಯವಿರೋಧಿಗಳ ಪರ ಅಲ್ಲ, ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ, ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ ಎಂದು ಹೇಳಿದ್ದಾರೆ.