ಬಳ್ಳಾರಿ : ಹಂಪಿ‌ಕನ್ನಡ ವಿವಿಯ ನಾಡೋಜ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಯಲಯದ ಗೌರವ ಡಾಕ್ಟರೇಟ್, ರಾಜ್ಯೋತ್ಸವ ಪಡೆದ ಹಿರಿಯ ರಂಗಭೂಮಿ ಕಲಾವಿದೆ, ಗಾಯಕಿ ಸುಭದ್ರಮ್ಮ ಮನ್ಸೂರ್ (81) ಅವರು ನಿನ್ನೆ ರಾತ್ರಿ 11.30 ರ ಸುಮಾರಿಗೆ ನಿಧನರಾಗಿದ್ದಾರೆ.

ಅವರು ತೀವ್ರ ಉಸಿರಾಟದ ಸಮಸ್ಯೆ ಬಳಲುತ್ತಿದ್ದರು, ಈ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ. ನಾಟಕ ಅಕಾಡೆಮಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.