ಕಲಬುರಗಿ,: ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ,  ಗೀತಾ ನಾಗಭೂಷಣ್ (78) ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.

ಕಲಬುರಗಿಯ ಸ್ವಸ್ತಿಕ್ ನಗರದಲ್ಲಿ ವಾಸವಿದ್ದರು, ಭಾನುವಾರ ಸಂಜೆ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ನಾಡೋಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಎಂಬ ದಾಖಲೆಯೂ ಇದೆ. ಭಾರತೀಯ ಭಾಷಾ ಪರಿಷತ್​ನ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ, ಕೇಂದ್ರ ಸಾಹಿತಿ ಅಕಾಡೆಮಿ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಅವರಾಗಿದ್ದಾರೆ. ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಸಾಹಿತಿಗೆ ಪಾತ್ರರಾಗಿದ್ದಾರೆ.