ಬೆಂಗಳೂರು : ನಾನು ಒಂದು ಜಾತಿಗೆ ಸಿಎಂ ಅಲ್ಲ, ಆರು ಕೋಟಿ ಕನ್ನಡಿಗರ ಸಿಎಂ. ಎಂದು ಕುಮಾರಸ್ವಾಮಿ ಹೇಳಿದರು. ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ಅವರು ಈ ಹಿಂದೆ ಹಾಸನಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎಂಬುದೂ ಚರ್ಚೆಯಾಗಲಿ ಹಾಗೂ  ಸ್ವಾತಂತ್ರ್ಯ ಬಂದ ಬಳಿಕ ಉತ್ತರ ಕರ್ನಾಟಕಕ್ಕೆ ನೀಡಿರುವ ಅನುದಾನಗಳ ಬಗ್ಗೆ ಚರ್ಚೆಗೆ ಸಿದ್ದ ಎಂದು ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ನಮ್ಮ ಸರ್ಕಾರ ರಚನೆಯಾಗಿ ಕೆಲವೇ ತಿಂಗಳಾಗಿವೆ. ಮೈತ್ರಿ ಸರ್ಕಾರ ರೈತರ ಪರವಾಗಿದೆ. ಯಾರೂ ಕೂಡ ಆತ್ಮಹತ್ಯೆಗೆ ಮುಂದಾಗಬಾರದು.ಸಮ್ಮಿಶ್ರ ಸರ್ಕಾರ 5 ವರ್ಷ ಅಧಿಕಾರ ಪೂರೈಸುತ್ತೆ. ಈ ಬಗ್ಗೆ ಯಾರಿಗೂ ಭಯ, ಆತಂಕ ಬೇಡ ಎಂದರು.