ಹೊಸದುರ್ಗ: ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಮೀಸಲಾತಿಗೆ ನೀಡಿದ ಸಲಹೆ ಪರಿಗಣಿಸದ ಪೌರಾಡಳಿತ ಸಚಿವ ನಾರಾಯಣಗೌಡ ಅವರ ರಾಜೀನಾಮೆಯನ್ನು ಸಿಎಂ ಪಡೆಯಬೇಕು. ಇಲ್ಲವೇ ನನ್ನ ರಾಜೀನಾಮೆ ಸ್ವೀಕರಿಸಲಿ ಎಂದು ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಆಗ್ರಹಿಸಿದ್ದಾರೆ.

ಶಾಸಕಾಂಗ ಪಕ್ಷದಲ್ಲಿ ಮಾತನಾಡಲು ಬಿಡುತ್ತಿಲ್ಲ. ಕೈಕಟ್ಟಿ ಬಾಯಿ ಮುಚ್ಚಿಕೊಳ್ಳಲು ಜನರು ನಮ್ಮನ್ನು ಆಯ್ಕೆ ಮಾಡಿಲ್ಲ. ನಾನು ಹೆಬ್ಬೆಟ್ಟು ಎಂಎಲ್‌ಎ ಅಲ್ಲ ಎಂದು ತಮ್ಮದೇ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.