ಜೈಪುರ : ನಾಯಿಯ ವಿಚಾರಕ್ಕೆ ಜಗಳವಾಡಿದ ವಿಧವೆಯಾದ ಸರ್ಕಾರಿ ಶಾಲಾ ಶಿಕ್ಷಕಿಯನ್ನು ನೆರೆಮನೆಯಾತ ಕೊಲೆ ಮಾಡಿದ್ದಾನೆ. ಈ ಘಟನೆ ಜೈಪುರದಲ್ಲಿ ನಡೆದಿದೆ.

ನೆರೆಮನೆಯಾತ ತನ್ನ ಮನೆಯ ಮುಂದೆ ನಾಯಿಯನ್ನು ಕರೆದುಕೊಂಡು ಹೋಗುತ್ತಿದದ್ದಕ್ಕೆ ಶಿಕ್ಷಕಿ ಆತನ ಬಳಿ ಜಗಳವಾಡಿದ್ದಳು. ಈ ವಿಚಾರಕ್ಕೆ ಕೋಪಗೊಂಡಿದ್ದ ಆತ ಮನೆಯಲ್ಲಿ ಒಬ್ಬಂಟಿಯಾಗಿದ್ದ ಶಿಕ್ಷಕಿಯ ಕತ್ತು ಹಿಸುಕಿ ಕೊಂದು ಆತ್ಮಹತ್ಯೆ ಎಂದು ಬಿಂಬಿಸಲು ನೇಣು ಬಿಗಿದಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದಾಗ ಆರೋಪಿ ಸಿಕ್ಕಿಹಾಕಿಕೊಂಡಿದ್ದಾನೆ.