ಬೆಂಗಳೂರು: ಎರಡು ಶಿಕ್ಷಕರ ಕ್ಷೇತ್ರಗಳು ಹಾಗೂ ಎರಡು ಪದವೀಧರರ ಕ್ಷೇತ್ರಗಳು ಸೇರಿದಂತೆ ವಿಧಾನಪರಿಷತ್​ನ ನಾಲ್ಕು ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರಿನ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಈಶಾನ್ಯ ವಲಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ನಮೋಶಿ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರ್ ಮತ್ತು ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿದಾನಂದ ಗೌಡರನ್ನು ಕಣಕ್ಕೆ ಇಳಿಸಲು ಬಿಜೆಪಿ ಮುಂದಾಗಿದೆ.