ನನವದೆಹಲಿ : ಜನವರಿ 1 ರಿಂದ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಮುಂದಾಗಿದೆ.

ಟೋಲ್ ಕೇಂದ್ರಗಳಲ್ಲಿ ವಾಹನ ದಟ್ಟಣೆ ತಡೆಯಲು ಹಾಗೂ ಡಿಜಿಟಲ್ ವಹಿವಾಟು ಉತ್ತೇಜಿಸಲು ಸರ್ಕಾರವು ಫಾಸ್ಟ್ಯಾಗ್ ಕಡ್ಡಾಯಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ಜನವರಿ 1 ರಿಂದ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

2017 ಕ್ಕೂ ಮುಂಚೆ ತಯಾರಿಸಲಾದ ಎಲ್ಲಾ ನಾಲ್ಕು ಚಕ್ರದ ವಾಹನಗಳಿಗೂ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಇದನ್ನು ಜಾರಿಗೆ ತರುವ ಸಂಬಂಧ ರಸ್ತೆ ಸಾರಿಗೆ ಸಚಿವಾಲಯವು ಕೇಂದ್ರ ಮೋಟಾರು ವಾಹನ ನಿಯಮಗಳಿಗೆ ಶೀಘ್ರದಲ್ಲೇ ತಿದ್ದುಪಡಿ ಮಾಡಲಿದೆ.