ಬೆಂಗಳೂರು:ರಾಜ್ಯದಲ್ಲಿ ನಾಳೆಯಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ತುಮಕೂರು, ಶಿವಮೊಗ್ಗ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಬಹುದು. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.