ಬೆಂಗಳೂರು: ಈಗಾಗಲೇ ಉತ್ತರ ಕರ್ನಾಟಕ ಸೇರಿ ತೆಲಂಗಾಣ ಮತ್ತು ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ ಮುಂದುವರೆದಿದೆ.

ಅ.19ರಿಂದ ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ ಸಂಭವಿಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಾಗಾಗಿ ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದ್ದು, ಬೀದರ್, ರಾಯಚೂರು, ಗದಗ, ಬಾಗಲಕೋಟೆ, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಆಲರ್ಟ್​ ಘೋಷಣೆ ಮಾಡಲಾಗಿದೆ.