ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ 11 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈ ಭಾಗದ ಜಿಲ್ಲೆಗಳಲ್ಲಿ ನಾಳೆಯಿಂದ ಸೆ.9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ 11 ಜಿಲ್ಲೆಗಳಲ್ಲಿ ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ ಹಾಗೂ  ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ 5 ದಿನ ಧಾರಾಕಾರ ಮಳೆಯಾಗುವ ನಿರೀಕ್ಷೆ ಇರುವುದರಿಂದ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.!