ಬೆಂಗಳೂರು : ರಾಜ್ಯದ ಹಲ ವೆಡೆ ನವೆಂಬರ್ 5,6 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ನವೆಂಬರ್ 5 ಮತ್ತು 6 ರಂದು ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನೂ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆ ಇದೆ ಹಾಗೂ ಬೆಂಗಳೂರಿನಲ್ಲಿ 4 ಮತ್ತು 5 ರಂದು ಸಾಧಾರಣ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.