ಬೆಂಗಳೂರು: ನಾಳೆಯಿಂದ ಲಾಡ್ಜ್‌, ಬಾರ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ ಅಂತ ಅಬಕಾರಿ ಸಚಿವ ಎಚ್‌.ನಾಗೇಶ್‌ ತಿಳಿಸಿದ್ದಾರೆ.

ಕೋರಾನ ವೈರಸ್‌ ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಒಂದೂವರೆ ತಿಂಗಳ ಕಾಲ ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿಶೇದ ಮಾಡಲಾಗಿತ್ತು, ಆದರೆ ಹೆಚ್ಚುತ್ತಿರುವ ಆರ್ಥಿಕ ವೆಚ್ಚವನ್ನು ಸರಿದೂಗಿಸುವ ಅನಿವಾರ್ಯತೆಯಿಂದಾಗಿ ದೇಶದ ಎಲ್ಲಾ ರಾಜ್ಯಗಳು ಕೂಡ ಮದ್ಯ ಮಾರಾಟಕ್ಕೆ ಸೋಮವಾರದಿಂದ ಮುಂದಾಗಿದೆ.

ಕಳೆದ ನಾಲ್ಕು ದಿನಗಳಿಂದಲೂ ರಾಜ್ಯದಲ್ಲಿ ದಾಖಲೆಯ ಪ್ರಮಾಣದಲ್ಲಿ ಮದ್ಯ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಹಣದ ಪ್ರಮಾಣದಲ್ಲಿ ಹೆಚ್ಚಳವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದ್ದು, ಇನ್ಮುಂದೆ ಬಾರ್‌, ಕ್ಲಬ್‌ಗಳಲ್ಲಿಯೂ ಬೆಳಗ್ಗೆ 9 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ಮದ್ಯ ಮಾರಾಟ ಮಾಡಲಾಗುವುದು ಎಂದು ತಿಳಿದುಬಂದಿದೆ.