ಬೆಂಗಳೂರು : ರಾಜ್ಯದಲ್ಲಿ ನಾಳೆಯಿಂದ ಜುಲೈ 17 ರವರೆಗೆ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.