ಬೆಂಗಳೂರು: ಬೆಂಗಳೂರಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರ ಅನುಕೂಲಕ್ಕಾಗಿ ಶುಕ್ರವಾರದಿಂದ ಬಿಎಂಟಿಸಿ ಬಸ್ ಸೇವೆ ಒದಗಿಸುವುದಾಗಿ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಸತ್ಯವತಿ ತಿಳಿಸಿದ್ದಾರೆ.

ಅಲ್ಲದೆ ಬಿಎಂಟಿಸಿ ಬಸ್ಗಳಲ್ಲಿ ಪ್ರಯಾಣಿಸುವ ಸಿಬ್ಬಂದಿಗಳು ತಮ್ಮ ಗುರುತಿನ ಚೀಟಿ ತೋರಿಸುವುದು, ಮಾಸ್ಕ್ ಧರಿಸಿಕೊಂಡು ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.