ಬೆಂಗಳೂರು: ರಾಜ್ಯದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇದೇ 25ರಿಂದ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೇ 24ರಿಂದ 26ರವರೆಗೆ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 25ರಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ