ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಾರಿಗೆ ನಿಗಮದ ಕಾರ್ಮಿಕ ಒಕ್ಕೂಟ ಗುರುವಾರ ಪ್ರತಿಭಟನೆ ನಡೆಸುವ ಹಿನ್ನೆಲೆಯಲ್ಲಿ ಬಿಎಂಟಿಸಿ, ಕೆಎಸ್ ಆರ್ ಟಿಸಿ ಸಂಚಾರ ಬಹುತೇಕ ಬಂದ್ ಆಗುವ ಸಾಧ್ಯತೆ ಇದೆ

ಸಾರಿಗೆ ನಿಗಮಗಳ ಕಾರ್ಮಿಕರು ಹಾಗೂ ಇತರ ಸಿಬ್ಬಂದಿಯನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸಬೇಕು ಎಂಬ ಬೇಡಿಕೆ ಸೇರಿದಂತೆ ಹಲವಾರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಯಲಿದೆ.

ಬೆಂಗಳೂರಿನಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಯಲಿದೆ. ಪ್ರತಿಭಟನೆಯಲ್ಲಿ ಪತ್ನಿ, ಮಕ್ಕಳೊಂದಿಗೆ ಸಾರಿಗೆ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.